Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:4 - ಕನ್ನಡ ಸತ್ಯವೇದವು J.V. (BSI)

4 ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:4
15 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.


ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.


ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ಕಿವಿಯುಳ್ಳವನು ಕೇಳಲಿ ಅಂದನು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು.


ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ, ಇಸ್ರಾಯೇಲ್ಯರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಆಗ ಅವನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು