ಯೆಹೆಜ್ಕೇಲನು 40:44 - ಕನ್ನಡ ಸತ್ಯವೇದವು J.V. (BSI)44 ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿ |