Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:7 - ಕನ್ನಡ ಸತ್ಯವೇದವು J.V. (BSI)

7 ಅಲ್ಲಿ [ಗೋಡೆಯಲ್ಲಿದ್ದ] ಒಂದೊಂದು ಕೋಣೆಯ ಉದ್ದ ಒಂದು ಕೋಲು, ಅಗಲ ಒಂದು ಕೋಲು; ಆ ಗೋಡೇಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಲಿನ ಅಗಲವು ಒಂದು ಕೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಒಂದೊಂದು ಕೋಣೆಯ ಉದ್ದ ಮೂರು ಮೀಟರ್, ಅಗಲ ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:7
14 ತಿಳಿವುಗಳ ಹೋಲಿಕೆ  

ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ


ಆದದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇವಿುನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಗೋತ್ರಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿಡುವವರೆಗೂ ಕಾಯಿರಿ ಅಂದೆನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ


ಬಂಗಾರದ ಮೊಳೆಗಳ ತೂಕ ಐವತ್ತು ತೊಲೆ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ


ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು.


ಮೂಡಣ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವುಕಂಬಗಳೂ ಒಂದೇ ಅಳತೆಯಾಗಿದ್ದವು.


ಅದರೊಳಗೆ ಎರಡು ಕಡೆ ಗೋಡೇಕೋಣೆಗಳು ಮೂರುಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು