Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:9 - ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ಎಂಟು ಮೊಳ; ನಿಲವುಕಂಬಗಳ ಅಗಲವು ಎರಡೆರಡು ಮೊಳ; ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಬದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:9
7 ತಿಳಿವುಗಳ ಹೋಲಿಕೆ  

ಆಗ ಯಾಜಕನು ಆ ದೋಷಪರಿಹಾರಕಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.


ಮೂಡಣ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವುಕಂಬಗಳೂ ಒಂದೇ ಅಳತೆಯಾಗಿದ್ದವು.


ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,


ಪರಿಶುದ್ಧ ಸ್ಥಳದ [ಈಚಿನ] ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.


ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು.


ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು