Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:15 - ಕನ್ನಡ ಸತ್ಯವೇದವು J.V. (BSI)

15 ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ಐವತ್ತು ಮೀಟರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಲಯದ ಹಿಂಭಾಗದಲ್ಲಿದ್ದ ನಿಯಮಿತದ ಸ್ಥಳದಲ್ಲಿ ಕಟ್ಟಿದ್ದ ಕಟ್ಟಡದ ಉದ್ದವನ್ನು ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು. ಪವಿತ್ರಸ್ಥಳ, ಮಹಾ ಪವಿತ್ರಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:15
13 ತಿಳಿವುಗಳ ಹೋಲಿಕೆ  

ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಆ ಪುರುಷನು ಒಳಗಣ ಮಂದಿರವನ್ನು ಅಳೆದುಬಿಟ್ಟ ನಂತರ ನನ್ನನ್ನು ಮೂಡಣ ಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು.


ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.


ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಿಗೆಗಳು ಚೌಕಚೌಕವಾಗಿ ಹೊದಿಸಲ್ಪಟ್ಟಿದ್ದವು; ಕಿಟಕಿಗಳ [ಪಕ್ಕಗಳಿಗೂ ಹಲಿಗೆಯ] ಹೊದಿಕೆಯಿತ್ತು.


ಪಡುವಲಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳ, ಉದ್ದ ತೊಂಭತ್ತು ಮೊಳ, ಅದರ ಗೋಡೆಯ ದಪ್ಪ ಐದು ಮೊಳ.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ನಮ್ಮ ಮನೆಯ ತೊಲೆಗಳು ದೇವದಾರು ವೃಕ್ಷಗಳು, ಜಂತೆಗಳು ತುರಾಯಿ ಮರಗಳು.


ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ,


ಮೂಡಲಲ್ಲಿನ ದೇವಸ್ಥಾನ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ನೂರು ಮೊಳವೂ ಇದ್ದವು.


ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲ್ಪಟ್ಟ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು;


ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು