Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:16 - ಕನ್ನಡ ಸತ್ಯವೇದವು J.V. (BSI)

16 ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲ್ಪಟ್ಟ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:16
14 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಳಂಧರ ಕಿಟಕಿಗಳನ್ನಿಡಿಸಿದನು.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.


ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು.


ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಿಗೆಗಳನ್ನು ಹಾಕಿಸಿದನು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.


ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಿಗೆಗಳಿಂದಲೂ ಆ ಹಲಿಗೆಗಳನ್ನು ತೋರಣ ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕಬಂಗಾರದ ತಗಡಿನಿಂದಲೂ ಹೊದಿಸಿ


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.


ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.


ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಿಗೆಗಳು ಚೌಕಚೌಕವಾಗಿ ಹೊದಿಸಲ್ಪಟ್ಟಿದ್ದವು; ಕಿಟಕಿಗಳ [ಪಕ್ಕಗಳಿಗೂ ಹಲಿಗೆಯ] ಹೊದಿಕೆಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು