Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:22 - ಕನ್ನಡ ಸತ್ಯವೇದವು J.V. (BSI)

22 ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:22
18 ತಿಳಿವುಗಳ ಹೋಲಿಕೆ  

ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.


ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.


ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.


ರಾಜನು ಅತ್ತ ಓಲಗದಲ್ಲಿದ್ದಾಗ ನನ್ನ ಜಟಾಮಾಂಸಿಯು ಇತ್ತ ಪರಿಮಳವನ್ನು ಬೀರುತ್ತಿತ್ತು.


ಪಶುಗಳನ್ನು ಕೊಯಿಸಿ [ಪಾನದ್ರವ್ಯಗಳೊಡನೆ] ದ್ರಾಕ್ಷಾರಸವನ್ನು ಬೆರಸಿ ಔತಣವನ್ನು ಸಿದ್ಧಪಡಿಸಿದ್ದಾಳೆ.


ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.


ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು.


ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು