Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:1
14 ತಿಳಿವುಗಳ ಹೋಲಿಕೆ  

ಇದಲ್ಲದೆ ಹೊರಗಣ ಪ್ರಾಕಾರದ ಬಡಗಣ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು.


ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.


ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು.


ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು;


ಕೊಠಡಿಗಳ ಹೊರಗೋಡೆಯ ದಪ್ಪವು ಐದು ಮೊಳವಿತ್ತು.


ಆಮೇಲೆ ಅವನು ನನ್ನನ್ನು ತೆಂಕಲಿಗೆ ಕರತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು.


ಪ್ರಾಕಾರದಲ್ಲಿನ ನಿಲವುಕಂಬದವರೆಗೆ ನಿಲವುಕಂಬಗಳನ್ನು [ಅಳತೆ] ಮಾಡಲು ಅರುವತ್ತು ಮೊಳವಿದ್ದವು; ಹೆಬ್ಬಾಗಿಲನ್ನು ಸುತ್ತುಮುತ್ತಲು [ಅಳೆದನು].


ಆಮೇಲೆ ಅವನು ನನ್ನನ್ನು ತೆಂಕಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರತಂದನು; ಅವನು ಆ ತೆಂಕಣ ಹೆಬ್ಬಾಗಿಲನ್ನೂ ಅಲ್ಲಿನ ಗೊಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು;


ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ [ದೀಕ್ಷಿತ ಯಾಜಕರ] ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು