Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:3 - ಕನ್ನಡ ಸತ್ಯವೇದವು J.V. (BSI)

3 ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಳಗಣ ಪ್ರಾಕಾರಕ್ಕೆ ಸೇರಿದ ಹತ್ತು ಮೀಟರ್ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶ ಇಪ್ಪತ್ತೈದು ಮೀಟರ್ ಅಗಲ. ಅಲ್ಲಿನ ಎರಡು ಸಾಲುಗಳ ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಿನ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡಸಾಲೆಗಳ ಮೇಲೆ ಪಡಸಾಲೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:3
7 ತಿಳಿವುಗಳ ಹೋಲಿಕೆ  

ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ [ದೀಕ್ಷಿತ ಯಾಜಕರ] ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.


ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ನಮ್ಮ ಮನೆಯ ತೊಲೆಗಳು ದೇವದಾರು ವೃಕ್ಷಗಳು, ಜಂತೆಗಳು ತುರಾಯಿ ಮರಗಳು.


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು