Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:4 - ಕನ್ನಡ ಸತ್ಯವೇದವು J.V. (BSI)

4 ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿದ್ದಾಗ್ಯೂ, ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:4
5 ತಿಳಿವುಗಳ ಹೋಲಿಕೆ  

ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು


ಇವುಗಳ ಮುಂದೆ ಓಣಿಯೊಂದಿತ್ತು; ಅವು ಬಡಗಲ ಕೋಣೆಗಳಂತೆ ಕಾಣಿಸುತ್ತಿದ್ದವು, ಇವುಗಳ ಉದ್ದವೂ ಅಗಲವೂ ಅವುಗಳ ಉದ್ದವೂ ಅಗಲವೂ ಒಂದೇ; ಇವುಗಳ ರಚನಾಕ್ರಮ ದ್ವಾರ ನಿರ್ಗಮಸ್ಥಾನಗಳೆಲ್ಲವೂ ಅವುಗಳಂತಿದ್ದವು; ತೆಂಕಲ ಕೋಣೆಗಳು ಹಾಗೆಯೇ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು