5-6 ಈ ಕಟ್ಟಡವು ಮೂರು ಅಂತಸ್ತು ಎತ್ತರವಿದ್ದಾಗ್ಯೂ ಇದಕ್ಕೆ ಹೊರಗಿನ ಪ್ರಾಕಾರಕ್ಕೆ ಇದ್ದಂತೆ ಸ್ತಂಭಗಳಿರಲಿಲ್ಲ. ಮೇಲಿನ ಅಂತಸ್ತಿನ ಕೋಣೆಗಳು, ಮಧ್ಯ ಮತ್ತು ಕೆಳಗಿನ ಅಂತಸ್ತುಗಳ ಕೋಣೆಗಳಿಂದ ಹಿಂದಕ್ಕೆ ಇದ್ದವು. ಮೇಲಿನಂತಸ್ತು, ಮಧ್ಯ ಅಂತಸ್ತಿಗಿಂತ ಕಿರಿದಾಗಿತ್ತು. ಮತ್ತು ಮಧ್ಯ ಅಂತಸ್ತು ಕೆಳಗಿನ ಅಂತಸ್ತಿಗಿಂತ ಅಗಲದಲ್ಲಿ ಕಿರಿದಾಗಿತ್ತು. ಯಾಕೆಂದರೆ ಮೇಲಂತಸ್ತುಗಳು ಆ ಜಾಗವನ್ನು ಆಕ್ರಮಿಸಿದ್ದವು.
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂತು; ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಬಿಗಿಯಾಗಿ ತಬ್ಬಿಕೊಂಡಂತೆ ಇದ್ದವು. ಹೀಗೆ ಮೇಲುಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಣ ಅಂತಸ್ತಿನಿಂದ ನಡುವಣ ಅಂತಸ್ತಿನ ಮಾರ್ಗವಾಗಿ ಮೇಲಣ ಅಂತಸ್ತಿಗೆ ಹತ್ತುತ್ತಿದ್ದರು.
ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.