Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:10 - ಕನ್ನಡ ಸತ್ಯವೇದವು J.V. (BSI)

10 ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:10
12 ತಿಳಿವುಗಳ ಹೋಲಿಕೆ  

ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.


ತಾವು ನಡಿಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ ನೀನು ದೇವಸ್ಥಾನದ ರೂಪವನ್ನೂ ವ್ಯವಸ್ಥೆಯನ್ನೂ ಗಮನಾಗಮನ ನಿಯಮಗಳನ್ನೂ ಸಕಲ ರಚನಾವಿಧಾನಗಳನ್ನೂ ಸಮಸ್ತ ವಿಧಿಗಳನ್ನೂ ಸರ್ವನಿರ್ಮಾಣರೀತಿಗಳನ್ನೂ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ತಿಳಿಸಿ ಅವರು ಅದರ ಪೂರ್ಣಕ್ರಮವನ್ನೂ ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕೊಟ್ಟಾರಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು ಕೃಪಾಸನಮಂದಿರ ಇವುಗಳ ನಕ್ಷೆಯನ್ನು ಕೊಟ್ಟು


ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.


ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.


ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು