Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:13 - ಕನ್ನಡ ಸತ್ಯವೇದವು J.V. (BSI)

13 ಯಜ್ಞವೇದಿಯು ಉದ್ದಮೊಳದ ಅಳತೆಯ ಪ್ರಕಾರ ಹೀಗಿರಬೇಕು (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿಯುದ್ದ) - ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಬಿಡುವಿನ ಅಗಲವು ಸುತ್ತಲೂ ಒಂದು ಮೊಳ, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಇದೇ ಬಲಿವೇದಿಕೆಯ ಪೀಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯಜ್ಞವೇದಿಕೆ ಉದ್ದಮೊಳದ ಅಳತೆಯ ಪ್ರಕಾರ ಇರಬೇಕು. ಯಜ್ಞವೇದಿಯ ಅಡಿಪಾಯದ ಸುತ್ತಲೂ ಕಾಲಿವೆ ತೋಡಲ್ಪಟ್ಟಿತ್ತು. ಅದರ ಆಳ ಒಂದು ಮೊಳ. ಪ್ರತಿಯೊಂದು ಕಡೆಯಲ್ಲಿ ಅದರ ಅಗಲ ಒಂದು ಮೊಳ. ಯಜ್ಞವೇದಿಯ ಸುತ್ತ ಒಂದು ಗೇಣುದ್ದದ ಚೌಕಟ್ಟಿತ್ತು. ಇದು ಎತ್ತರವಾದ ಯಜ್ಞವೇದಿಯ ವಿನ್ಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:13
5 ತಿಳಿವುಗಳ ಹೋಲಿಕೆ  

ದೇವಸ್ಥಾನದ ಸುತ್ತುಮುತ್ತಲು ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ತುಂಬಾ ಆರು ಮೊಳದ ಅಳತೇಕೋಲಿನಷ್ಟು ಎತ್ತರವಾಗಿತ್ತು.


ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು; ಆ ಪುರುಷನ ಕೈಯಲ್ಲಿ ಆರು ಉದ್ದಮೊಳದ ಅಳತೇಕೋಲೊಂದಿತ್ತು (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿಯುದ್ದ); ಅವನು ಆ ಗೋಡೆಯ ದಪ್ಪವನ್ನು ಒಂದು ಕೋಲು, ಎತ್ತರವನ್ನು ಒಂದು ಕೋಲು ಅಳೆದನು.


ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.


ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು