ಯೆಹೆಜ್ಕೇಲನು 43:2 - ಕನ್ನಡ ಸತ್ಯವೇದವು J.V. (BSI)2 ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು. ಅಧ್ಯಾಯವನ್ನು ನೋಡಿ |