Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:22 - ಕನ್ನಡ ಸತ್ಯವೇದವು J.V. (BSI)

22 ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷಪರಿಹಾರಕಯಜ್ಞಕ್ಕಾಗಿ ಅರ್ಪಿಸು; ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:22
12 ತಿಳಿವುಗಳ ಹೋಲಿಕೆ  

ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು;


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು