Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:23 - ಕನ್ನಡ ಸತ್ಯವೇದವು J.V. (BSI)

23 ನೀನು ಯಜ್ಞವೇದಿಯ ಶುದ್ಧೀಕಾರ್ಯವನ್ನು ತೀರಿಸಿದ ಮೇಲೆ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀನು ಬಲಿಪೀಠದ ಶುದ್ಧೀಕಾರ್ಯವನ್ನು ಪೂರೈಸಿದ ಮೇಲೆ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತ ಟಗರನ್ನೂ ಅರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯಜ್ಞವೇದಿಯನ್ನು ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:23
4 ತಿಳಿವುಗಳ ಹೋಲಿಕೆ  

ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;


ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ


ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು