Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:24 - ಕನ್ನಡ ಸತ್ಯವೇದವು J.V. (BSI)

24 ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಲು ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ ಯೆಹೋವನಿಗಾಗಿ ಸರ್ವಾಂಗಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನ ಸನ್ನಿಧಾನದಲ್ಲಿ ಅವುಗಳನ್ನು ವಧಿಸಬೇಕು. ಆಮೇಲೆ ಯಾಜಕರು ಅದರ ಮೇಲೆ ಉಪ್ಪು ಚಿಮುಕಿಸಿ ಹೋರಿ ಮತ್ತು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:24
6 ತಿಳಿವುಗಳ ಹೋಲಿಕೆ  

ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು.


ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.


ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆ.


ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.


ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು