ಯೆಹೆಜ್ಕೇಲನು 43:25 - ಕನ್ನಡ ಸತ್ಯವೇದವು J.V. (BSI)25 ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು. ಅಧ್ಯಾಯವನ್ನು ನೋಡಿ |