Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:27 - ಕನ್ನಡ ಸತ್ಯವೇದವು J.V. (BSI)

27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:27
16 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಇಸ್ರಾಯೇಲ್ಯರ ಹಿರಿಯರನ್ನೂ ಕರೆದು ಆರೋನನಿಗೆ ಹೀಗಂದನು -


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.


ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.


ಹೀಗೆ ಏಳು ದಿವಸ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಟಗರನ್ನೂ ನೈವೇದ್ಯಕ್ಕಾಗಿ ಎಣ್ಣೆವಿುಶ್ರವಾದ ಪದಾರ್ಥವನ್ನೂ ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು