Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:9 - ಕನ್ನಡ ಸತ್ಯವೇದವು J.V. (BSI)

9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:9
11 ತಿಳಿವುಗಳ ಹೋಲಿಕೆ  

ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆಮಾಡಿದನು.


ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು