Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:10 - ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:10
20 ತಿಳಿವುಗಳ ಹೋಲಿಕೆ  

ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.


ನಮ್ಮ ಅರಸರೂ ಪ್ರಭುಗಳೂ ಯಾಜಕರೂ ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ; ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಲಕ್ಷಿಸಲಿಲ್ಲ.


ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.


ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ದ್ರವ್ಯವನ್ನು ಹೊಲೆಮಾಡಿದವನಾದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.


ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ಶಿಷ್ಟನೇ ಭೂವಿುಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ ದುಷ್ಟನೂ ಪಾಪಿಯೂ ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು