Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:12 - ಕನ್ನಡ ಸತ್ಯವೇದವು J.V. (BSI)

12 ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:12
19 ತಿಳಿವುಗಳ ಹೋಲಿಕೆ  

ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ


ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ


ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಈ ಜನರನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರಷ್ಟೆ; ನಡಿಸಲ್ಪಟ್ಟವರೂ ನಾಶವಾಗುತ್ತಾರೆ.


ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.


ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು