ಯೆಹೆಜ್ಕೇಲನು 44:17 - ಕನ್ನಡ ಸತ್ಯವೇದವು J.V. (BSI)17 ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. ಅಧ್ಯಾಯವನ್ನು ನೋಡಿ |