Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:18 - ಕನ್ನಡ ಸತ್ಯವೇದವು J.V. (BSI)

18 ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:18
9 ತಿಳಿವುಗಳ ಹೋಲಿಕೆ  

ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು.


ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು