Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:2 - ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ನನಗೆ - ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನಲ್ಲಾ; ಇದು ಮುಚ್ಚೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರ ನನಗೆ, “ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಯೇಲಿನ ದೇವರಾದ ಸರ್ವೇಶ್ವರ ಇದರಿಂದ ಪ್ರವೇಶಿಸಿದ್ದಾರೆ; ಇದು ಮುಚ್ಚೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ನನಗೆ ಹೀಗೆಂದನು, “ಈ ದ್ವಾರವು ಮುಚ್ಚಿಯೇ ಇರಬೇಕು. ಇದು ತೆರೆಯಲ್ಪಡುವದಿಲ್ಲ. ಇದರ ಮೂಲಕ ಯಾರೂ ಪ್ರವೇಶ ಮಾಡುವದಿಲ್ಲ. ಯಾಕೆಂದರೆ ಇಸ್ರೇಲಿನ ದೇವರಾದ ಯೆಹೋವನು ಈ ದ್ವಾರದ ಮೂಲಕ ಪ್ರವೇಶಿಸಿದ್ದನು. ಆದ್ದರಿಂದ ಇದು ಮುಚ್ಚಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:2
5 ತಿಳಿವುಗಳ ಹೋಲಿಕೆ  

ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಆಮೇಲೆ ಆತನು ನನ್ನನ್ನು ಮೂಡಣ ಬಾಗಿಲಿಗೆ ಬರಮಾಡಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು