ಯೆಹೆಜ್ಕೇಲನು 44:25 - ಕನ್ನಡ ಸತ್ಯವೇದವು J.V. (BSI)25 ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನು ಅಪವಿತ್ರಮಾಡಿಕೊಳ್ಳಬಾರದು; ಆದರೆ [ಸತ್ತ] ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರಮಾಡಿಕೊಳ್ಳಬಹುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನೇ ಅಶುದ್ಧಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ , ಮದುವೆಯಿಲ್ಲದ ತಂಗಿ, ಇವರಿಗಾಗಿ ಒಬ್ಬನು ತನ್ನನ್ನೇ ಅಶುದ್ಧಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು. ಅಧ್ಯಾಯವನ್ನು ನೋಡಿ |