Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:31 - ಕನ್ನಡ ಸತ್ಯವೇದವು J.V. (BSI)

31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:31
8 ತಿಳಿವುಗಳ ಹೋಲಿಕೆ  

ಅದು ಅವನ ಜೀವನವಷ್ಟೆ. ತಾನಾಗಿ ಸತ್ತುಬಿದ್ದದ್ದನ್ನಾಗಲಿ ಕಾಡುಮೃಗದಿಂದ ಕೊಲ್ಲಲ್ಪಟ್ಟದ್ದನ್ನಾಗಲಿ ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ನೀವು ನನಗೆ ಪರಿಶುದ್ಧ ಜನರಾಗಿರಬೇಕು; ಆದದರಿಂದ ಕಾಡುಮೃಗಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು


ತಾನಾಗಿ ಸತ್ತು ಬಿದ್ದದ್ದನ್ನಾಗಲಿ ಕಾಡುಮೃಗಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾದರೂ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು