Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:8 - ಕನ್ನಡ ಸತ್ಯವೇದವು J.V. (BSI)

8 ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:8
12 ತಿಳಿವುಗಳ ಹೋಲಿಕೆ  

ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವದಿಲ್ಲ ಎಂದು ಹೇಳಿದನು.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ದೇವಾಲಯದ ಸಕಲ ಸೇವೆಯಲ್ಲಿಯೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಪರಿಚರ್ಯ.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದೇ ಹೊರತು ಅವರಿಂದ ಬೇರೆ ಪರಿಚರ್ಯವನ್ನು ಮಾಡಿಸಕೂಡದು. ಲೇವಿಯರು ಕಾಪಾಡಬೇಕಾದವುಗಳ ವಿಷಯದಲ್ಲಿ ನೀನು ಹೀಗೆ ಅವರಿಗೆ ನೇವಿುಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು