ಯೆಹೆಜ್ಕೇಲನು 44:9 - ಕನ್ನಡ ಸತ್ಯವೇದವು J.V. (BSI)9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು. ಅಧ್ಯಾಯವನ್ನು ನೋಡಿ |