ಯೆಹೆಜ್ಕೇಲನು 45:1 - ಕನ್ನಡ ಸತ್ಯವೇದವು J.V. (BSI)1 ನೀವು ದೇಶವನ್ನು ಸ್ವಾಸ್ತ್ಯಸ್ವಾಸ್ತ್ಯವಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು; ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ; ಆ ಪ್ರಾಂತವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ. ಅಧ್ಯಾಯವನ್ನು ನೋಡಿ |