Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:19 - ಕನ್ನಡ ಸತ್ಯವೇದವು J.V. (BSI)

19 ಆಗ ಯಾಜಕನು ಆ ದೋಷಪರಿಹಾರಕಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಾಪಪರಿಹಾರಕಯಜ್ಞಕ್ಕೆ ಬಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಅದನ್ನು ಆಲಯದ ಬಾಗಿಲಿನ ನಿಲುವು ಕಂಬಗಳಿಗೂ, ಯಜ್ಞವೇದಿಕೆಯ ಸಜ್ಜದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಬಗಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:19
8 ತಿಳಿವುಗಳ ಹೋಲಿಕೆ  

ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲವು ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ನಾಲ್ಕು ಮೊಳ, ಮೇಲಣ ಬಿಡುವಿನ ಅಗಲವು ಒಂದು ಮೊಳ.


ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ ಹದಿನಾಲ್ಕು ಮೊಳ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ; ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳ; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.


ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು