ಯೆಹೆಜ್ಕೇಲನು 45:4 - ಕನ್ನಡ ಸತ್ಯವೇದವು J.V. (BSI)4 ಇದು ದೇಶದಲ್ಲಿ ಪರಿಶುದ್ಧ ಭಾಗ; ಇದು ಪವಿತ್ರಾಲಯದ ಅರ್ಚಕರೂ ಯೆಹೋವನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿ |