Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:1 - ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:1
15 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು;


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಶಲ್ಲೂಮ್ಯರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಅವನು ಸೇರಿದಾಗ ಕೆರೂಬಿಗಳು ದೇವಾಲಯದ ತೆಂಕಲಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.


ಅವನು ಮೂಡಲಲ್ಲಿಯೂ ಬಡಗಲಲ್ಲಿಯೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಪ್ರಾಕಾರದ ಹೊರಗಡೆಯ ತನಕ ಅಳೆಯಲು ನೂರು ಮೊಳವಿತ್ತು.


ಆಮೇಲೆ ಆತನು ನನ್ನನ್ನು ಮೂಡಣ ಬಾಗಿಲಿಗೆ ಬರಮಾಡಿದಾಗ


ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.


ಪ್ರಭುವು ಸ್ವಂತ ಇಚ್ಫೆಯಿಂದ ಕಾಣಿಕೆಯನ್ನಾಗಲಿ ಸರ್ವಾಂಗಹೋಮವನ್ನಾಗಲಿ ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಮೂಡಲ ಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು