Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:10 - ಕನ್ನಡ ಸತ್ಯವೇದವು J.V. (BSI)

10 ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:10
16 ತಿಳಿವುಗಳ ಹೋಲಿಕೆ  

ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿ ಆರಿಸಿಕೊಂಡು ಪ್ರಭುವಾಗುವದಕ್ಕೂ ಚಾದೋಕನನ್ನು ಯಾಜಕನಾಗುವದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು