ಯೆಹೆಜ್ಕೇಲನು 46:11 - ಕನ್ನಡ ಸತ್ಯವೇದವು J.V. (BSI)11 [ಪ್ರಭುವು] ಉತ್ಸವಗಳಲ್ಲಿಯೂ ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ರಾಜನು ಉತ್ಸವಗಳಲ್ಲೂ ಹಬ್ಬಗಳಲ್ಲೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಸಾಧ್ಯವಿದ್ದಷ್ಟು ಸೇರು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಹಬ್ಬದ ದಿವಸಗಳಲ್ಲಿ ಮತ್ತು ಬೇರೆ ವಿಶೇಷ ದಿವಸಗಳಲ್ಲಿ ಪ್ರತಿ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಯನ್ನು ಸಮರ್ಪಿಸಬೇಕು. ಮತ್ತು ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನ್ನು ಸಮರ್ಪಿಸಬೇಕು. ಕುರಿಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.