Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:13 - ಕನ್ನಡ ಸತ್ಯವೇದವು J.V. (BSI)

13 ನೀನು ಪೂರ್ಣಾಂಗವಾದ ವರುಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ದಿನವಹಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀನು ಕಳಂಕರಹಿತವಾದ ಒಂದು ವರ್ಷದ ಕುರಿಯನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ದಿನಂಪ್ರತಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:13
11 ತಿಳಿವುಗಳ ಹೋಲಿಕೆ  

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ


ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು