ಯೆಹೆಜ್ಕೇಲನು 46:16 - ಕನ್ನಡ ಸತ್ಯವೇದವು J.V. (BSI)16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಪ್ರಭುವು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನಮಾಡಿದರೆ ಅದು ತಂದೆಯ ಸ್ವಾಸ್ತ್ಯವಾದ ಕಾರಣ ಮಕ್ಕಳಿಗೆ ಹಕ್ಕುಬರುವದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಒಬ್ಬ ರಾಜನು ತನ್ನ ಗಂಡುಮಕ್ಕಳಿಗೆ ತನ್ನ ಭೂಮಿಯ ಭಾಗವನ್ನು ಉಚಿತವಾಗಿ ಕೊಟ್ಟರೆ ಅದು ಅವನ ಗಂಡುಮಕ್ಕಳಿಗೆ ಸೇರುವದು. ಅದು ಅವರ ಆಸ್ತಿಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ. ಅಧ್ಯಾಯವನ್ನು ನೋಡಿ |
ಪ್ರಭುವಿನ ಸ್ವಾಸ್ತ್ಯವು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ ರಾಜಧಾನಿಗೆ ಒಳಪಟ್ಟ ಭೂವಿುಗೂ ಉಭಯಪಾರ್ಶ್ವಗಳಲ್ಲಿರುವದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂವಿುಯ ಪಡುವಲಲ್ಲಿ ಅದು ಪಡುವಲಿಗೆ ಹರಡುವದು, ಮೂಡಲಲ್ಲಿ ಮೂಡಲಿಗೆ ಹರಡುವದು, ಅದರ ಉದ್ದವು ಪಡುವಲಿಂದ ಮೂಡಲಿಗೆ ಒಂದು ಕುಲದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವದು.