ಯೆಹೆಜ್ಕೇಲನು 46:2 - ಕನ್ನಡ ಸತ್ಯವೇದವು J.V. (BSI)2 ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು. ಅಧ್ಯಾಯವನ್ನು ನೋಡಿ |