ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;