Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:1
20 ತಿಳಿವುಗಳ ಹೋಲಿಕೆ  

ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಐದೈದು ಮೊಳ, ಪರಿಶುದ್ಧ ಸ್ಥಳದ ಉದ್ದ ನಾಲ್ವತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು.


ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಆಗ ಅವನು ನನಗೆ - ಇವು ದೇವಾಲಯದ ಸೇವಕರು ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು ಎಂದು ಹೇಳಿದನು.


ಆಗ ಅವನು ನನ್ನನ್ನು ಬಡಗಣ ಹೆಬ್ಬಾಗಿಲಿಂದ ದೇವಾಲಯದ ಹೊರಗಣ ಮಾರ್ಗವಾಗಿ ಸುತ್ತಿಸಿಕೊಂಡು ಮೂಡಲ ಹೆಬ್ಬಾಗಿಲಿಗೆ ಕರತಂದನು; ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.


ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ಇವರು ಹಾಡುತ್ತಾ ಕುಣಿಯುತ್ತಾ - ನನ್ನ [ಜೀವಜಲದ] ಒರತೆಗಳೆಲ್ಲಾ ನಿನ್ನಲ್ಲಿಯೇ ಅವೆ ಅನ್ನುವರು.


ಆಮೇಲೆ ಅವನು ಮೂಡಣ ಹೆಬ್ಬಾಗಿಲಿಗೆ ಬಂದು ಮೆಟ್ಲುಗಳನ್ನು ಹತ್ತಿ ಹೊಸ್ತಲಿನ ಅಗಲವನ್ನು ಒಂದು ಕೋಲಳೆದನು. ಒಂದೊಂದು ಹೊಸ್ತಲಿನ ಅಗಲವು ಒಂದೊಂದು ಕೋಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು