Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:16 - ಕನ್ನಡ ಸತ್ಯವೇದವು J.V. (BSI)

16 ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:16
15 ತಿಳಿವುಗಳ ಹೋಲಿಕೆ  

[ಹಂಚುವಿಕೆಯನ್ನು ಅನುಸರಿಸಿ] ಕುಲಗಳ ಹೆಸರುಗಳು ಇವೇ; [ದೇಶದ] ಕೇವಲ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಬಡಗಣ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವದು; ಅದರ ಪಾರ್ಶ್ವಗಳು [ದೇಶದ] ಪೂರ್ವಪಶ್ಚಿಮಗಳ [ಎಲ್ಲೆಗಳ] ತನಕ ಚಾಚಿಕೊಂಡಿರುವವು.


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡುಹೋದನು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಹೀಗೆ ಬಡಗಣ ಮೇರೆಯು ಸಮುದ್ರದಿಂದ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತವಿರುವದು. ಇದು ಬಡಗಣ ಮೇರೆ.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದದರಿಂದಲೂ ಅಪರಿವಿುತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ ಹೆಲ್ಬೋನಿನ ದ್ರಾಕ್ಷಾರಸವನ್ನೂ ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸಿದರು.


ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.


ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು