ಯೆಹೆಜ್ಕೇಲನು 47:22 - ಕನ್ನಡ ಸತ್ಯವೇದವು J.V. (BSI)22 ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು. ಅಧ್ಯಾಯವನ್ನು ನೋಡಿ |