Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:3 - ಕನ್ನಡ ಸತ್ಯವೇದವು J.V. (BSI)

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಮೂಡಲಿಗೆ ಮುಂದರಿದು ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:3
12 ತಿಳಿವುಗಳ ಹೋಲಿಕೆ  

ಆತನು ನನ್ನನ್ನು ಅಲ್ಲಿಗೆ ತರಲು ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೇಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ನನ್ನ ಸಂಗಡ ಮಾತಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಪ್ರಾಕಾರವನ್ನೂ ಅಳತೆ ಮಾಡುವದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೇಕೋಲನ್ನು ಹಿಡಿದಿದ್ದನು.


ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ನಾನು ಕಣ್ಣೆತ್ತಿನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.


ಆಗ ಅವನು ನನ್ನನ್ನು ಬಡಗಣ ಹೆಬ್ಬಾಗಿಲಿಂದ ದೇವಾಲಯದ ಹೊರಗಣ ಮಾರ್ಗವಾಗಿ ಸುತ್ತಿಸಿಕೊಂಡು ಮೂಡಲ ಹೆಬ್ಬಾಗಿಲಿಗೆ ಕರತಂದನು; ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.


ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ನೀರು ಸೊಂಟದವರೆಗೆ ಇತ್ತು.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು