Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:6 - ಕನ್ನಡ ಸತ್ಯವೇದವು J.V. (BSI)

6 ಆಗ ಅವನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:6
8 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.


ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.


ಅವನು ನನ್ನನ್ನು - ನಿನಗೆ ಏನು ಕಾಣಿಸುತ್ತಿದೆ ಎಂದು ಕೇಳಿದ್ದಕ್ಕೆ - ಹಾರುತ್ತಿರುವ ಒಂದು ಸುರಳಿಯು ಕಾಣಿಸುತ್ತದೆ; ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದುತ್ತರ ಕೊಟ್ಟೆನು.


ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು