Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:11 - ಕನ್ನಡ ಸತ್ಯವೇದವು J.V. (BSI)

11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:11
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.


ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.


ಇದು ದೇಶದಲ್ಲಿ ಪರಿಶುದ್ಧ ಭಾಗ; ಇದು ಪವಿತ್ರಾಲಯದ ಅರ್ಚಕರೂ ಯೆಹೋವನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವದು.


ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿಪವಿತ್ರವೂ ದೇಶದೊಳಗಣ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು