Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:12 - ಕನ್ನಡ ಸತ್ಯವೇದವು J.V. (BSI)

12 ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿಪವಿತ್ರವೂ ದೇಶದೊಳಗಣ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರ ಅತಿಪವಿತ್ರವೂ ನಾಡಿನಲ್ಲಿನ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪವಿತ್ರ ಪ್ರಾಂತ್ಯದ ಈ ಭಾಗವು ಆ ಯಾಜಕರಿಗಾಗಿ ಮೀಸಲಾಗಿದೆ. ಇದು ಲೇವಿಯರ ಭೂಮಿಗೆ ಪಕ್ಕದಲ್ಲಿ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:12
4 ತಿಳಿವುಗಳ ಹೋಲಿಕೆ  

ಇದು ದೇಶದಲ್ಲಿ ಪರಿಶುದ್ಧ ಭಾಗ; ಇದು ಪವಿತ್ರಾಲಯದ ಅರ್ಚಕರೂ ಯೆಹೋವನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವದು.


ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.


ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.


ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ, ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು; [ಈ ಎರಡು ಪಾಲುಗಳ] ಒಟ್ಟಳತೆ ಎಷ್ಟಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು