Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:21 - ಕನ್ನಡ ಸತ್ಯವೇದವು J.V. (BSI)

21 ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂವಿುಯ ಎರಡು ಕಡೆಗಳಲ್ಲಿ ವಿುಕ್ಕ ಭೂವಿುಯು ಪ್ರಭುವಿನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಮೂಡಲ ಕಡೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಎಲ್ಲೆಯ ಪಕ್ಕದಲ್ಲಿಯೂ ಪಡುವಲ ಕಡೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಎಲ್ಲೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವದು; ಅದು ಪ್ರಭುವಿನದು; ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ [ಎರಡು ಭಾಗಗಳ] ಮಧ್ಯದಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಮಿಕ್ಕ ಭೂಮಿ ರಾಜನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ರಾಜನದು; ಮೀಸಲಾದ ಪವಿತ್ರಕ್ಷೇತ್ರ ಹಾಗು ಪವಿತ್ರಾಲಯ ಅದರ ಎರಡು ಭಾಗಗಳ ಮಧ್ಯೆ ಇರುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 “ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಧಿಪತಿಗೆ ಸೇರಿದೆ. ಈ ಭೂಪ್ರದೇಶವು ಚೌಕವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷ ಪ್ರದೇಶದಲ್ಲಿ ಒಂದು ಭಾಗವು ಯಾಜಕರಿಗೂ ಒಂದು ಭಾಗವು ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಧಿಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಧಿಪತಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಪರಿಶುದ್ಧ ಭಾಗವೂ ಪಟ್ಟಣದ ಸೊತ್ತಿಗೂ ಈ ಕಡೆಗೂ ಆ ಕಡೆಗೂ ಉಳಿದ ಭೂಮಿಯು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರುವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂಥದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ ಮಧ್ಯದಲ್ಲಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:21
8 ತಿಳಿವುಗಳ ಹೋಲಿಕೆ  

ಪ್ರಭುವಿನ ಪಾಲಿನ [ಎರಡು ಭಾಗಗಳ] ನಡುವಣ ಲೇವಿಯರ ಪಾಲಿನ [ಬಡಗಣ] ಮೇರೆಯಿಂದ ರಾಜಧಾನಿಗೆ ಒಳಪಟ್ಟ ಭೂವಿುಯ [ತೆಂಕಣ] ಮೇರೆಯ ತನಕ ಅಂದರೆ ಯೆಹೂದದ [ತೆಂಕಣ] ಸರಹದ್ದಿನಿಂದ ಬೆನ್ಯಾಮೀನಿನ [ಬಡಗಣ] ಸರಹದ್ದಿನವರೆಗೆ ಪ್ರಭುವಿನ ಪಾಲು ಹರಡಿರುವದು.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು; ಬಡಗಲಲ್ಲಿ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಪಡುವಲಲ್ಲಿ ಅಗಲವು ಹತ್ತು ಸಾವಿರ ಮೊಳ, ಮೂಡಲಲ್ಲಿ ಅಗಲವು ಹತ್ತು ಸಾವಿರ ಮೊಳ, ತೆಂಕಲಲ್ಲಿ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವದು.


ಯೆಹೂದದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವದು; ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ, ಉದ್ದವು ಪಡುವಲಿಂದ ಮೂಡಲಿಗೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವದು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಮೀಸಲಾದ ಪೂರ್ಣಕ್ಷೇತ್ರದ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತೈದು ಸಾವಿರ ಮೊಳ; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರವು ರಾಜಧಾನಿಗೆ ಒಳಪಟ್ಟ ಭೂವಿುಸಹಿತವಾಗಿ ಚಚ್ಚೌಕವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು