Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:31 - ಕನ್ನಡ ಸತ್ಯವೇದವು J.V. (BSI)

31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಬಡಗಲಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿ ಬಾಗಿಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪಟ್ಟಣದ ಬಾಗಿಲುಗಳಿಗೆ ಇಸ್ರಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರದಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ್ಯ ಬಾಗಿಲು, ಮತ್ತೊಂದು ಲೇವಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:31
9 ತಿಳಿವುಗಳ ಹೋಲಿಕೆ  

ಅದರ ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ; ರಾತ್ರಿಯಂತೂ ಅಲ್ಲಿಲ್ಲ.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಫವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು, ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರರತ್ನಗಳಿಂದ ನಿರ್ಮಿಸುವೆನು.


ಮೂಡಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು;


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ರಾಜಧಾನಿಯ ಗಡಿಗಳು ಹೀಗಿರಬೇಕು; ಬಡಗಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು