Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:8 - ಕನ್ನಡ ಸತ್ಯವೇದವು J.V. (BSI)

8 ಯೆಹೂದದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವದು; ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ, ಉದ್ದವು ಪಡುವಲಿಂದ ಮೂಡಲಿಗೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜುದೇಯದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು; ಅದರ ಅಗಲ ಹನ್ನೆರಡುವರೆ ಕಿಲೋಮೀಟರ್, ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸ್ವಾಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:8
13 ತಿಳಿವುಗಳ ಹೋಲಿಕೆ  

ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂವಿುಯ ಎರಡು ಕಡೆಗಳಲ್ಲಿ ವಿುಕ್ಕ ಭೂವಿುಯು ಪ್ರಭುವಿನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಮೂಡಲ ಕಡೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಎಲ್ಲೆಯ ಪಕ್ಕದಲ್ಲಿಯೂ ಪಡುವಲ ಕಡೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಎಲ್ಲೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವದು; ಅದು ಪ್ರಭುವಿನದು; ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ [ಎರಡು ಭಾಗಗಳ] ಮಧ್ಯದಲ್ಲಿರುವವು.


ನೀವು [ಮೀಸಲು ಭೂವಿುಯಲ್ಲಿ] ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಹತ್ತು ಸಾವಿರ ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು