Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:1 - ಕನ್ನಡ ಸತ್ಯವೇದವು J.V. (BSI)

1 ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಟ್ಟು ತ್ರಾಸನ್ನು ತಂದು ಅದರಿಂದ ಆ ಕೂದಲನ್ನು ಸರಿಯಾಗಿ ಮೂರು ಭಾಗ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 “ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:1
6 ತಿಳಿವುಗಳ ಹೋಲಿಕೆ  

ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.


ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;


ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು


ನರಪುತ್ರನೇ, ನೀನು ಒಂದು ಚದರ ಬಿಲ್ಲೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ ಯೆರೂಸಲೇವಿುನ ನಕ್ಷೆಯನ್ನು ಬರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು